ಬಿ.ಎಡ್ ಪದವಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ನಗರದ ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ, ಪರೀಕ್ಷಾ ಕೇಂದ್ರದಲ್ಲಿ ಬಿ.ಎಡಿ ಪದವಿ ಪರೀಕ್ಷೆಯು ಜುಲೈ 16 ರಿಂದ 25ರ ವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪ ಪೋಲಿಸ್ ಆಯುಕ್ತ ಮಿಥುನ್ ಹೆಚ್.ಎನ್ ಆದೇಶಿಸಿದ್ದಾರೆ.

Scroll to Top