(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಜುಲೈ 17 ಮತ್ತು 18ರ ವರೆಗೆ ಮಂಗಳೂರು ನಗರದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಸಿ.ಎಸ್.ಐ.ಆರ್ ಯುಜಿಸಿ ನೆಟ್ ಪರೀಕ್ಷೆ ನಡೆಯಲಿದೆ.
ಪರೀಕ್ಷೆ ನಡೆಯುವ ಸಮಯ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ, ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪ ಪೋಲಿಸ್ ಆಯುಕ್ತ ಮಿಥುನ್ ಹೆಚ್.ಎನ್ ಆದೇಶಿಸಿದ್ದಾರೆ.
ಸಿಎಸ್ಐಆರ್ ಯುಜಿಸಿ ನೆಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿ









