ಸುಳ್ಯ ವಲಯಾರಣ್ಯಾಧಿಕಾರಿ ಎನ್. ಮಂಜುನಾಥ್ ಅವರಿಗೆ ವರ್ಗಾವಣೆ



(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ರಾಜ್ಯ ಅರಣ್ಯ ಇಲಾಖೆಯಲ್ಲಿ ನಡೆದ  40 ವಲಯ ಅರಣ್ಯಾಧಿಕಾರಿಗಳ (RFO) ವರ್ಗಾವಣೆಗೆ ಸಂಬಂಧಿಸಿದ ಆದೇಶ ಹೊರಡಿಸಲಾಗಿದೆ.







 

ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ಅವರನ್ನು ಕುಶಾಲನಗರದ ವಲಯ ಅರಣ್ಯ ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ಕಳೆದ ಕೆಲವು ವರ್ಷಗಳಿಂದ ಸುಳ್ಯ ಹಾಗೂ ಪಂಜ ವಲಯ ಅರಣ್ಯಾಧಿಕಾರಿಯಾಗಿದ್ದ ಮಂಜುನಾಥ್ ಅವರು ದಕ್ಷ ಹಾಗು ಜನಪ್ರಿಯ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು.






ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ವಿಮಲ್ ಬಾಬು ಅವರನ್ನು ಕುಶಾಲನಗರದ ವಲಯ ಅರಣ್ಯ ತರಬೇತಿ ಕೇಂದ್ರಕ್ಕೆ ವರ್ಗಾಯಿಸಲಾಗಿದೆ.

ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ಸ್ಥಾನಕ್ಕೆ ಹನೂರು ವನ್ಯಜೀವಿ ವಲಯದ ನಿರಂಜನ್ ಶೆಟ್ಟಿ ಹಾಗೂ ಕುದುರೆಮುಖ ವನ್ಯ ಜೀವಿ ವಲಯದ ಚೇತನ್ ಹೆಚ್.ಪಿ. ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

error: Content is protected !!
Scroll to Top