ಹೊಳೆಯಿಂದ ಅಕ್ರಮವಾಗಿ ಮರಳು ಎತ್ತುತ್ತಿದ್ದ ಸ್ಥಳಕ್ಕೆ ವಿಟ್ಲ ಪೊಲೀಸರ ಎಂಟ್ರಿ: ಇಬ್ಬರು ಆರೋಪಿಗಳ ವಿರುದ್ಧ ಕೇಸ್

(ನ್ಯೂಸ್‌ ಕಡಬ) newskadaba.com,  ಜು.20 : ವಿಟ್ಲ ಕಸಬಾ ಗ್ರಾಮದ ಕಂಬಳಬೆಟ್ಟುವಿನ ನೆಕ್ಕರೆಯಲ್ಲಿ ಹೊಳೆಯಿಂದ ಅಕ್ರಮವಾಗಿ ಮರಳು ಹೊರತೆಗೆದು ಗೋಣಿ ಚೀಲಗಳಿಗೆ ತುಂಬಿಸುತ್ತಿದ್ದ ಸ್ಥಳದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ.

ಕುಳಾ ಗ್ರಾಮದ ಕಾರ್ಯಾಡಿ ನಿವಾಸಿ ಮೊಹಮ್ಮದ್ ಮತ್ತು ಒಕ್ಕೆತ್ತೂರು ನಿವಾಸಿ ಶರೀಫ್.ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ 60 ಚೀಲ ಮರಳು.

ವಿಶ್ವಾಸಾರ್ಹ ಮಾಹಿತಿ ಆಧರಿಸಿ ವಿಟ್ಲ ಸಬ್-ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿ ಈ ದಾಳಿ ನಡೆಸಿದ್ದಾರೆ.ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Scroll to Top