ಸಾಲು ಮರದ ತಿಮ್ಮಕ್ಕನ ಬಗ್ಗೆ ವದಂತಿ‌ ಹಬ್ಬಿಸಿದ ಆರೋಪ ► ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.30. ಸಾಲು ಮರದ ತಿಮ್ಮಕ್ಕನ ಬಗ್ಗೆ ಸುಳ್ಳು ವದಂತಿ ಹಬ್ಬಿಸಿದವನ ಬೆಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮೈಸೂರು ಜಿಲ್ಲೆಯ ಕೆ.ಆರ್ ನಗರ ತಾಲೂಕಿನ ಸಾಲಿಗ್ರಾಮ ಹೋಬಳಿಯ ಹರದನಹಳ್ಳಿ ಗ್ರಾಮದ ಪ್ರದೀಪ್ ಗೌಡ ಎಂದು ಗುರುತಿಸಲಾಗಿದೆ. ಈತ ತನ್ನ ಸ್ನೇಹ ಲೋಕ ಎಂಬ ಫೇಸ್‍ಬುಕ್ ಗ್ರೂಪ್ ನಲ್ಲಿ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಫೋಟೊವನ್ನು ಎಡಿಟ್ ಮಾಡಿ ಸುಳ್ಳು ಸುದ್ದಿ ಹಬ್ಬಿದ್ದ ಹಿನ್ನೆಲೆಯಲ್ಲಿ ಸಾಲು ಮರದ ತಿಮ್ಮಕ್ಕರ ದತ್ತು ಪುತ್ರ ಉಮೇಶ್ ನೀಡಿದ್ದ ದೂರಿನನ್ವಯ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Also Read  ಜೇಸಿಐ ವಲಯ 15ರ ಮಧ್ಯಂತರ ಸಮ್ಮೇಳನ 'ರಂಗೋಲಿ - 2022' ➤ JFM ಕಾಶೀನಾಥ್ ಗೋಗಟೆ ನೇತೃತ್ವದ ಜೇಸಿಐ ಕಡಬ ಕದಂಬ ಘಟಕಕ್ಕೆ ಪ್ರಶಸ್ತಿಗಳ ಸುರಿಮಳೆ

error: Content is protected !!
Scroll to Top