ಮಂಗಳೂರು: ಮೀನುಗಾರಿಕಾ ಬಂದರಿನಲ್ಲಿ ನೀರಿಗೆ ಬಿದ್ದ ಮಹಿಳೆಯ ರಕ್ಷಣೆ; ಸ್ಥಳೀಯ ಮೀನುಗಾರರ ಸಮಯಪ್ರಜ್ಞೆಗೆ ಮೆಚ್ಚುಗೆ



(ನ್ಯೂಸ್‌ ಕಡಬ) newskadaba.com,  ಜು .21: ನಗರದ ಮೀನುಗಾರಿಕಾ ಬಂದರಿನಲ್ಲಿ ನಿರ್ಮಾಣ ಹಂತದಲ್ಲಿರುವ ಡಾಕ್ ಸಮೀಪ ಆಕಸ್ಮಿಕವಾಗಿ ನೀರಿಗೆ ಬಿದ್ದ ಮಹಿಳೆಯೊಬ್ಬರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ.







ಮಂಗಳೂರು ನಗರದ ಮೀನುಗಾರಿಕಾ ಬಂದರ್. ಮಹಿಳೆ ನೀರಿಗೆ ಬಿದ್ದ ತಕ್ಷಣವೇ ಸ್ಪಂದಿಸಿದ ಸ್ಥಳೀಯ ಮೀನುಗಾರರು, ತಡಮಾಡದೆ ಸಮುದ್ರಕ್ಕಿಳಿದು ಕೆಲವೇ ಕ್ಷಣಗಳಲ್ಲಿ ಅವರನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ.






ಮೀನುಗಾರರ ಸಮಯಪ್ರಜ್ಞೆ ಹಾಗೂ ಸಾಹಸಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.ಮಹಿಳೆ ನೀರಿಗೆ ಬಿದ್ದದ್ದು ಆಕಸ್ಮಿಕವೇ ಅಥವಾ ಇತರ ಕಾರಣಗಳಿವೆಯೇ ಎಂಬ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.

error: Content is protected !!
Scroll to Top