ಎಸ್.ಸಿ/ಎಸ್.ಟಿ ಪದವೀಧರರಿಗೆ ಡಿಜಿಟಲ್ ಮಾಧ್ಯಮ ಸ್ಥಾಪಿಸಲು ಧನ ಸಹಾಯ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 21. ಪತ್ರಿಕೋದ್ಯಮ ಪದವಿ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಯುವತಿಯರು ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಉದ್ಯಮವನ್ನು ಸ್ಥಾಪಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಹಾಗೂ ಅರ್ಜಿಯನ್ನು ಪಡೆಯಲು ಉರ್ವಸ್ಟೋರ್ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆ (ದೂರವಾಣಿ ಸಂಖ್ಯೆ: 0824-2451237 & 9480843030) ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top