(ನ್ಯೂಸ್ ಕಡಬ) newskadaba.com ಜು. 21. ವಾಣಿಜ್ಯ ಪರೀಕ್ಷೆಯು ಜುಲೈ 20 ರಿಂದ ಜುಲೈ 28 ರವರೆಗೆ ನಗರದ ಕೊಡಿಯಾಲ್‍ಬೈಲ್ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯಲಿದ್ದು, ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪಪೋಲಿಸ್ ಆಯುಕ್ತ ಮಿಥುನ್ ಹೆಚ್.ಎನ್ ಆದೇಶಿಸಿದ್ದಾರೆ.
ವಾಣಿಜ್ಯ ಪರೀಕ್ಷೆ: ನಿಷೇಧಾಜ್ಞೆ ಜಾರಿ









