ಯುಪಿಎಸ್.ಸಿ ತರಬೇತಿ: ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಜು. 23. 2026-27ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯು.ಪಿ.ಎಸ್.ಸಿ ನಾಗರಿಕ ಸೇವಾ ಪರೀಕ್ಷಾ ಪೂರ್ವ ತರಬೇತಿಯನ್ನು ಉಚಿತ ಊಟ ಹಾಗೂ ವಸತಿಯೊಂದಿಗೆ ನೀಡಲು ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 3 ದಿನ.
ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೊಂದು ಪದವಿ ಪಡೆದಿರಬೇಕು. ಅಭ್ಯರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಅಥವಾ 3(ಬಿ) ಗೆ ಸೇರಿರಬೇಕು. ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ ರೂ.5 ಲಕ್ಷಗಳ ಒಳಗಿರಬೇಕು. ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ರವರು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳು, ಪ್ರವರ್ಗ ಹಾಗೂ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಪರೀಕ್ಷಾ ಕೇಂದ್ರಗಳು, ದಿನಾಂಕ ಮತ್ತು ಸಮಯವನ್ನು ನಂತರದ ದಿನಗಳಲ್ಲಿ ಇಲಾಖಾ ವೆಬ್‍ ಸೈಟ್‍ ನಲ್ಲಿ ಪ್ರಕಟಿಸಲಾಗುತ್ತದೆ. ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಇಲಾಖೆಯಿಂದಲೇ ಉಚಿತ ಊಟ ಹಾಗೂ ವಸತಿಯೊಂದಿಗೆ ತರಬೇತಿಯನ್ನು ನೀಡುವ ಹಿನ್ನೆಲೆಯಲ್ಲಿ ಯಾವುದೇ ತರಬೇತಿ ಭತ್ಯೆಯನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‍ಸೈಟ್ https://bcwd.karnataka.gov.in ಅಥವಾ sevasindhuservices.karnataka.gov.in ಅಥವಾ ಸಹಾಯವಾಣಿ: 8050770004 ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







 

error: Content is protected !!
Scroll to Top