SC-ST ವಿದ್ಯಾರ್ಥಿವೇತನ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ; ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಸಚಿವರ ಆಶ್ವಾಸನೆ



(ನ್ಯೂಸ್‌ ಕಡಬ) newskadaba.com,  ಜು.22  ವಿದ್ಯಾರ್ಥಿ ವೇತನ ಹೆಚ್ಚಳ: SC-ST ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಸ್ಕಾಲರ್ ಶಿಪ್‌ ಸಾಕಾಗುತ್ತಿಲ್ಲ ಎಂಬ ಮನವಿಗೆ ಸ್ಪಂದಿಸಿದ ಸಚಿವರು, ಈ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ತಿಳಿಸಿದರು.







ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದಿದ್ದರೂ ಸರಿಯಾಗಿ ಜಾರಿಯಾಗುತ್ತಿಲ್ಲ ಎಂಬ ದೂರಿಗೆ, ಕಾಯ್ದೆಯನ್ನು ಶೀಘ್ರವೇ ಸರಿಯಾಗಿ ಅನುಷ್ಠಾನಗೊಳಿಸುವ ಭರವಸೆ ನೀಡಿದರು.ಬಾಕಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.






ಅರಣ್ಯ ಇಲಾಖೆಯಿಂದ ಆದಿವಾಸಿಗಳ ತೆರವು ವಿಚಾರವಾಗಿ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಮಾತುಕತೆ ನಡೆಸುವುದಾಗಿ ಹೇಳಿದರು.ದಲಿತರಿಗೆ ಗ್ಯಾರಂಟಿ ಯೋಜನೆಗಳ ಲಾಭ ಸರಿಯಾಗಿ ತಲುಪುತ್ತಿಲ್ಲ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

ವಿಶೇಷ ಸೂಚನೆ: ದಲಿತ ಹಾಗೂ ಆದಿವಾಸಿ ಸಮುದಾಯಗಳ ಹಲವು ವರ್ಷಗಳ ಪ್ರಮುಖ ಬೇಡಿಕೆಗಳಿಗೆ ಸಭೆಯಲ್ಲಿ ಸಕಾರಾತ್ಮಕ ಸ್ಪಂದನೆ ದೊರೆತಿದೆ.

error: Content is protected !!
Scroll to Top