(ನ್ಯೂಸ್ ಕಡಬ) newskadaba.com ಜು. 23. ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2026-27ನೇ ಸಾಲಿನ ಸಾಮಾನ್ಯ/ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ Sevasindhu.karnataka.gov.in ಮೂಲಕ ಆಗಸ್ಟ್ 20 ರೊಳಗೆ ಸಲ್ಲಿಸಬೇಕು. ಸರ್ಕಾರದ ಮಾರ್ಗಸೂಚಿಯನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್‍ಸೈಟ್ www.kannadasiri.karnataka.gov.in ನಲ್ಲಿ ಅಳವಡಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-24410574/ 08022213530/ 9986837037/ 08022241325 ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









