(ನ್ಯೂಸ್ ಕಡಬ) newskadaba.com, ಜು.23 “ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆ ಉಲ್ಲಂಘಿಸಿ ಮೀನುಗಾರಿಕೆ ನಡೆಸುತ್ತಿದ್ದ 9 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ.”
“ಬುಧವಾರ ಸಂಜೆ ತಲೈಮನ್ನಾರ್ ಉತ್ತರ ಭಾಗದ ಶ್ರೀಲಂಕಾ ಜಲಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಲಂಕಾ ನೌಕಾಪಡೆ, ಮೀನುಗಾರರೊಂದಿಗೆ ಅವರ ಟ್ರಾಲರ್ ದೋಣಿಯನ್ನೂ ವಶಕ್ಕೆ ಪಡೆದುಕೊಂಡಿದೆ. ಕಾರ್ಯಾಚರಣೆ ವೇಳೆ 50ಕ್ಕೂ ಹೆಚ್ಚು ಭಾರತೀಯ ಬೋಟ್ಗಳು ಗಡಿ ದಾಟಿರುವುದು ಪತ್ತೆಯಾಗಿದೆ ಎಂದು ನೌಕಾಪಡೆ ತಿಳಿಸಿದೆ.”
“ಬಂಧಿತ ಮೀನುಗಾರರನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಮನ್ನಾರ್ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.”









