ಅಪೂರ್ಣ ರಸ್ತೆ ಕಾಮಗಾರಿಗೆ ಬಲಿಯಾದ ವಾಹನ: ಸೇಡಿಯಾಪು ಕಾಪುವಿನಲ್ಲಿ ಟಾಟಾ ಏಸ್ ಮಗುಚಿ ಅಪಘಾತ

(ನ್ಯೂಸ್‌ ಕಡಬ) newskadaba.com,  ಜು. 24: ಉಪ್ಪಿನಂಗಡಿ ಸಮೀಪದ ಸೇಡಿಯಾಪು ಕಾಪು ಎಂಬಲ್ಲಿ ಜುಲೈ 23ರಂದು ಟಾಟಾ ಏಸ್ ಸರಕು ಸಾಗಣೆ ವಾಹನವೊಂದು ಪಲ್ಟಿಯಾಗಿ 11 ವರ್ಷದ ಬಾಲಕ ಗಾಯಗೊಂಡಿದ್ದಾನೆ.

ಕೊಯಿಲಾದ ಸನ್ಯಾಸಿಗುಡ್ಡೆ ನಿವಾಸಿ ಅಬ್ದುಲ್ ಮಜೀದ್ ಅವರು ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಚಲಾಯಿಸುತ್ತಿದ್ದ ವಾಹನದ ಚಕ್ರ ರಸ್ತೆಯಂಚಿಗೆ ಇಳಿದು ಈ ಅಪಘಾತ ಸಂಭವಿಸಿದೆ. ಪರಿಣಾಮ ವಾಹನದಲ್ಲಿದ್ದ ಅವರ ಪುತ್ರ ಗಾಯಗೊಂಡಿದ್ದಾರೆ.

ಇತ್ತೀಚೆಗೆ ಪೂರ್ಣಗೊಂಡ ಕಾಂಕ್ರೀಟ್ ರಸ್ತೆ ಕಾಮಗಾರಿಯ ಬಳಿಕ ರಸ್ತೆಯಂಚಿಗೆ ಮಣ್ಣು ಹಾಕದ ಕಾರಣ ಆಳವಾದ ತಗ್ಗಿದ್ದು, ಡಿವೈಡರ್ ಕೂಡ ಇರಲಿಲ್ಲ. ಇದರಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಮಗುಚಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಈ ಕುರಿತು ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top