ನೀಟ್ ವಿವಾದ: ಕೇಂದ್ರ ಉನ್ನತ ಶಿಕ್ಷಣ ಕಾರ್ಯದರ್ಶಿ ಬದಲಾವಣೆ

(ನ್ಯೂಸ್ ಕಡಬ) newskadaba.com ಜು. 24. ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ತೀವ್ರ ಪ್ರತಿಭಟನೆಗಳ ಬೆನ್ನಲ್ಲೇ, ಕೇಂದ್ರ ಸರ್ಕಾರವು ಹಿರಿಯ ಐಎಎಸ್ ಅಧಿಕಾರಿಗಳ ಮಟ್ಟದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದೆ.

1994 ರ ರಾಜಸ್ಥಾನ ಕೇಡರ್‌ನ ಹಿರಿಯ ಐಎಎಸ್ ಅಧಿಕಾರಿ ನರೇಶ್ ಪಾಲ್ ಗಂಗ್ವಾರ್ ಅವರನ್ನು ನೂತನ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿ ಕೇಂದ್ರ ಸರ್ಕಾರ ತಡರಾತ್ರಿ ಆದೇಶ ಹೊರಡಿಸಿದೆ. ಗಂಗ್ವಾರ್ ಅವರು ಈ ಹಿಂದೆ ಮೀನುಗಾರಿಕೆ, ಪಶುಸಂಗೋಪನೆ, ಪರಿಸರ-ಅರಣ್ಯ ಸಚಿವಾಲಯ ಹಾಗೂ ರಾಜಸ್ಥಾನ ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿದ್ದ 1992 ರ ಮಣಿಪುರ ಕೇಡರ್‌ನ ಐಎಎಸ್ ಅಧಿಕಾರಿ ವಿನೀತ್ ಜೋಶಿ ಅವರನ್ನು ಆ ಹುದ್ದೆಯಿಂದ ಬದಲಾಯಿಸಿದ್ದು, ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.

Scroll to Top