ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್: ಶಿಕ್ಷೆ ಅವಧಿ 10 ವರ್ಷಕ್ಕೆ ಏರಿಕೆ ಸಾಧ್ಯತೆ!

(ನ್ಯೂಸ್‌ ಕಡಬ) newskadaba.com,  ಜು. 24:ದೇಶದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳನ್ನು ತಡೆಯಲು ಹಾಲಿ ಇರುವ ಕಾನೂನನ್ನು ಮತ್ತಷ್ಟು ಕಠಿಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ.ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆ 2024 ಕ್ಕೆ ತಿದ್ದುಪಡಿ ತರಲು ಯೋಜನೆ ರೂಪಿಸಲಾಗಿದ್ದು, ಕೇಂದ್ರ ಸಚಿವ ಸಂಪುಟದ ಅನುಮೋದನೆ ಸಿಗುವ ಸಾಧ್ಯತೆಯಿದೆ.

ಹಾಲಿ ನಿಯಮವು 3 ರಿಂದ 5 ವರ್ಷ ಜೈಲು ಶಿಕ್ಷೆ ಮತ್ತು ₹10 ಲಕ್ಷದವರೆಗೆ ದಂಡ  ಇತ್ತು.ಆದರೆ ಪ್ರಸ್ತಾವಿತ ತಿದ್ದುಪಡಿಯಲ್ಲಿ 5 ರಿಂದ 10 ವರ್ಷ ಜೈಲು ಶಿಕ್ಷೆ ಹಾಗೂ ₹1 ಕೋಟಿಯವರೆಗೆ ದಂಡ.

ಪರೀಕ್ಷಾ ಅಕ್ರಮ ಪ್ರಕರಣಗಳ ಶೀಘ್ರ ತನಿಖೆ ಮತ್ತು ವಿಚಾರಣೆಗಾಗಿ ಪ್ರತ್ಯೇಕ ‘ಫಾಸ್ಟ್ ಟ್ರ್ಯಾಕ್ ಕೋರ್ಟ್’ಗಳನ್ನು ಸ್ಥಾಪಿಸುವ ನಿಬಂಧನೆ ಸೇರ್ಪಡೆ.ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ವಿಡಿಯೋ ಸಂದೇಶ ರವಾನಿಸಿದ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ.

Scroll to Top