ಬೆಂಗಳೂರಿನಲ್ಲಿ 4 ಮಂದಿಗೆ ಕೋವಿಡ್-19 ಪಾಸಿಟಿವ್: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ



(ನ್ಯೂಸ್‌ ಕಡಬ) newskadaba.com,  ಜು.26 ಬೆಂಗಳೂರಿನಲ್ಲಿ ನಾಲ್ವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.







ಆಂಧ್ರಪ್ರದೇಶದಲ್ಲಿ ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಡಿಭಾಗದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.






ನೆರೆ ರಾಜ್ಯದಲ್ಲಿ ಸೋಂಕು ಹೆಚ್ಚುತ್ತಿರುವ ಕಾರಣ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ, ಪಾವಗಡ ಸೇರಿದಂತೆ ಆಂಧ್ರ ಗಡಿಯ 8 ಪ್ರಮುಖ ಮಾರ್ಗಗಳಲ್ಲಿ ಕೋವಿಡ್ ತಪಾಸಣೆ ಆರಂಭಿಸಿದ್ದು, ಅಗತ್ಯ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಿದೆ.

error: Content is protected !!
Scroll to Top