ದೃಶ್ಯಕಲೆಯಲ್ಲಿ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಜು. 27. ಮೈಸೂರು ವಿಶ್ವವಿದ್ಯಾನಿಲಯದ 2026-27ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಎಂ.ವಿ.ಎ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಬಿ.ವಿ.ಎ/ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸಲು  ಜುಲೈ  31 ಕೊನೆಯ ದಿನ. ಎಂ.ವಿ.ಎ. ಸ್ನಾತಕೋತ್ತರ ಪದವಿಯು ದೃಶ್ಯಕಲೆಯಲ್ಲಿ 2 ವರ್ಷಗಳ 4 ಸೆಮಿಸ್ಟರ್ “ಸಿಬಿಸಿಎಸ್” (CBCS) ಪದ್ಧತಿಯ ಕೋರ್ಸ್ ಆಗಿದ್ದು, ಈ ಸ್ನಾತಕೋತ್ತರ ಪದ್ಧತಿಯು ಚಿತ್ರಕಲೆ (Painting), ಶಿಲ್ಪಕಲೆ (Sculpture), ಮತ್ತು ಅಚ್ಚುಕಲೆ (Graphics), ವಿಷಯಗಳಲ್ಲಿ ವಿಶೇಷ ಅಧ್ಯಯನವನ್ನು ಒಳಗೊಂಡಿರುತ್ತದೆ. ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ  ದಿನ ಆಗಸ್ಟ್ 3 ಆಗಿರುತ್ತದೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2438931 ಸಂಪರ್ಕಿಸಬಹುದು ಎಂದು  ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







error: Content is protected !!
Scroll to Top