(ನ್ಯೂಸ್ ಕಡಬ) newskadaba.com ಜು. 27. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಹಾಗೂ ಕೆನರಾ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಶ್ರೀ ಮ.ನಿ.ಪ್ರ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ ಆಗಸ್ಟ್ 1ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೆನರಾ ಕಾಲೇಜಿನಲ್ಲಿ ನಡೆಯಲಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಆಪ್ತ ಸಮಾಲೋಚಕ ರಫೀಕ್ ಮಾಸ್ಟರ್ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಆಗಸ್ಟ್ 1ರಂದು ಜಿಲ್ಲಾಡಳಿತದ ವತಿಯಿಂದ ವ್ಯಸನ ಮುಕ್ತ ದಿನಾಚರಣೆ









