ಅಲ್ಪಸಂಖ್ಯಾತರ ವಿದೇಶಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಜು. 27. ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ  ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನಕ್ಕೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 31 ಕೊನೆಯ ದಿನ. ಸೇವಾಸಿಂಧು https://sevasindhuservices.karnataka.gov.in/ ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ನಂ-16ಸಿ, ಮೌಲಾನಾ ಅಬ್ದುಲ್ ಕಲಾಂ ಅಜಾದ್ ಭವನ, ಮಿಲ್ಲರ್ ಟ್ಯಾಂಕ್‍ ಬೆಡ್ ರಸ್ತೆ, ವಸಂತನಗರ, ಬೆಂಗಳೂರು-560052 ಇಲ್ಲಿಗೆ ನಿಗದಿಪಡಿಸಿದ ದಿನಾಂಕದಂದು ಸಲ್ಲಿಸಬೇಕು. ಹಾರ್ಡ್ ಕಾಪಿಯನ್ನು ಸಲ್ಲಿಸುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ಇ-ಮೇಲ್ ಮೂಲಕ ತಿಳಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‍ಸೈಟ್ dom.karnataka.gov.in/dakshina_kannada/public ಹಾಗೂ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







error: Content is protected !!
Scroll to Top