(ನ್ಯೂಸ್ ಕಡಬ) newskadaba.com ಜು.29: ಕರಾವಳಿ ಕರ್ನಾಟಕದಲ್ಲಿ ‘ಪುಷ್ಯ ನಕ್ಷತ್ರ’ದ ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಜುಲೈ 29ರಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಮಳೆಯ ತೀವ್ರತೆ ಹೆಚ್ಚಾಗಲಿರುವ ಕಾರಣ ಕರಾವಳಿಯ ಮೂರೂ ಜಿಲ್ಲೆಗಳ ಜನತೆಗೆ ವಿಶೇಷ ಎಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.









