(ನ್ಯೂಸ್ ಕಡಬ) newskadaba.com ಮಂಗಳೂರು, ಜು. 30. ಖಾದಿ ಬಳಕೆಯನ್ನು ಉತ್ತೇಜಿಸಲು ಎಲ್ಲಾ ಸರ್ಕಾರಿ/ ಅನುದಾನಿತ ಸಂಸ್ಥೆಗಳು/ ನಿಗಮ/ಮಂಡಳಿ/ಸ್ವಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ ಅಧಿಕಾರಿ/ನೌಕರರುಗಳು ಸ್ವಯಂ ಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸಲು ಹಾಗೂ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಖಾದಿ ಉಡುಪನ್ನು ಧರಿಸುವಂತೆ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳಿಗೆ ಸೂಚಿಸಲಾಗಿದೆ.
ಅದರಂತೆ, ರೂರಲ್ ರಿಸೋರ್ಸಸ್ ಡೆವಲಪ್ ಮೆಂಟ್ ಅಸೋಸಿಯೇಷನ್ ಸಂಘದವರು ಮಂಗಳೂರಿನಲ್ಲಿ ದೈನಂದಿನ ಬಳಕೆಯ ಖಾದಿ ಉಡುಪುಗಳನ್ನು ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ಉದ್ದೇಶಿಸಿದ್ದು, ಜುಲೈ 27 ರಿಂದ ಆಗಸ್ಟ್ 1ರ ವರೆಗೆ 6 ದಿನಗಳವರೆಗೆ ನಗರದ ಮಿನಿ ವಿಧಾನಸೌಧ ಆವರಣದಲ್ಲಿರುವ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕರಾವಳಿ ಸಭಾಂಗಣದಲ್ಲಿ ಖಾದಿ ಉಡುಪುಗಳನ್ನು ಮಾರಾಟ ಮಾಡುತ್ತಿದ್ದು, ಈಗಾಗಲೇ ನಿಗಧಿಯಾಗಿರುವ ಮಾರಾಟದ ದಿನಾಂಕವನ್ನು ಆಗಸ್ಟ್ 7 ರವರೆಗೆ ವಿಸ್ತರಿಸಲಾಗಿದೆ.
ಆದ್ದರಿಂದ ಅಧಿಕಾರಿ/ಸಿಬ್ಬಂದಿ ವರ್ಗದವರು ಮೇಲ್ಕಂಡ ವಿಳಾಸಕ್ಕೆ ಭೇಟಿ ನೀಡಿ ಖಾದಿ ಉಡುಪುಗಳನ್ನು ವಿಶೇಷ ರಿಯಾಯಿತಿ ದರದಲ್ಲಿ ಖರೀದಿಸಿ ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಲು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ(ಪ್ರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








