ಕ್ರೀಡಾ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ



(ನ್ಯೂಸ್ ಕಡಬ) newskadaba.com ಮಂಗಳೂರು, ಜು. 30. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ..
2025-26 ನೇ ಸಾಲಿನ ಕ್ರೀಡಾ ವಿದ್ಯಾರ್ಥಿ ವೇತನ  ಹಾಗೂ 2026-27 ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಕೆಗೆ ಈ ಹಿಂದೆ ಜುಲೈ 31 ಕೊನೆಯ ದಿನವಾಗಿತ್ತು. ಈಗ ಅವಧಿಯನ್ನು ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ. ಅರ್ಹ ಕ್ರೀಡಾಪಟುಗಳು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಎಂ.ಎನ್.ಅನುಚೇತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







error: Content is protected !!
Scroll to Top