ಕಡಬ: ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸೈಂಟ್ ಆನ್ಸ್ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ



(ನ್ಯೂಸ್ ಕಡಬ) newskadaba.com ಜು. 30. ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು ಹಾಗೂ ಸಂತ ಜೋಕಿಮ್ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಕಡಬ ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.







ಪ್ರೌಢಶಾಲಾ ಹಾಗೂ ಪ್ರಾಥಮಿಕ ವಿಭಾಗದ ಮಕ್ಕಳ 17ರ ಹಾಗೂ 14ನೇ ವಯೋಮಾನದ ಪಂದ್ಯಾಟದಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು, 17ರ ವಯೋಮಾನದ ಕೆಳಗಿನ ಹಾಗೂ 14ನೇ ವಯೋಮಾನದ ಕೆಳಗಿನ ಬಾಲಕ ಹಾಗೂ ಬಾಲಕಿಯರು ಪ್ರಥಮ ಸ್ಥಾನವನ್ನು ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.






error: Content is protected !!
Scroll to Top