ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ



(ನ್ಯೂಸ್ ಕಡಬ) newskadaba.com ಕಡಬ, ಜು. 30. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಸೈಂಟ್ ಜೋಕಿಮ್ಸ್ ಹಿರಿಯ ಪ್ರಾಥಮಿಕ ಶಾಲೆ ಕಡಬ ಇದರ ಜಂಟಿ ಆಶ್ರಯದಲ್ಲಿ  ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಕಡಬ ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.







ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸೈಂಟ್ ಜೋಕಿಮ್ಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಫಾದರ್ ಪ್ರಕಾಶ್ ಪೌಲ್  ಡಿ’ಸೋಜಾ ಅವರು ವಿದ್ಯಾರ್ಥಿಗಳು  ಕಲಿಕೆಯೊಂದಿಗೆ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಸರ್ವಾಂಗೀಣ ಪ್ರಗತಿ ಸಾಧ್ಯವಾಗುತ್ತದೆ ಎಂದು ಹೇಳಿ ಸ್ಪರ್ಧಿಗಳಿಗೆ ಶುಭ ಹಾರೈಸಿದರು.






ಪ್ರಾಸ್ತಾವಿಕ ಮಾತುಗಳನ್ನಾಡಿದ ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಸಿಲ್ವಿಯಾ ರೂತ್ ಕ್ಯಾಸ್ತೆಲಿನೋ ‘ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ, ಎಲ್ಲರೂ ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು’ ಎಂದರು.

ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿದ ಸೈಂಟ್ ಜೋಕಿಮ್ಸ್ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀ ಕ್ಷೇವಿಯರ್ ಬೇಬಿ ಎಮ್ ಪಿ ಇವರು ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಕೊಳ್ಳುವುದರಿಂದ ಚೈತನ್ಯ ವೃದ್ಧಿಯಾಗುತ್ತದೆ ಎಂದರು.

ಪುತ್ತೂರು ತಾಲೂಕು ಶಿಕ್ಷಣ ಸಂಯೋಜಕಿ ಶ್ರೀಮತಿ ಪುಷ್ಪಾವತಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಸೈಂಟ್ ಜೋಕಿಮ್ಸ್ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷರಾದ ಶ್ರೀಮತಿ ಜೆಸಿಂತಾ ವೇಗಸ್, ಪ್ರಾಥಮಿಕ ವಿಭಾಗದ ಕಡಬ ತಾಲೂಕು ದೈಹಿಕ ಶಿಕ್ಷಣ ನೋಡಲ್ ಅಧಿಕಾರಿ ಶ್ರೀ ರಾಮಣ್ಣ, ಕಡಬ ತಾಲೂಕು ಪ್ರೌಢಶಾಲಾ ವಿಭಾಗದ ನೋಡಲ್ ಅಧಿಕಾರಿ ಶ್ರೀ ರಾಜೇಶ್ ನಾಯಕ್, ಸೈಂಟ್ ಆನ್ಸ್ ಪ್ರೌಢಶಾಲಾ ಪ್ರಾಂಶುಪಾಲರಾದ ವಂದನೀಯ ಫಾದರ್ ಸುನಿಲ್ ಪ್ರವೀಣ್ ಪಿಂಟೋ, ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲಾ ವಿಭಾಗ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ಗಣೇಶ್ ಡಿ, ಸೈಂಟ್ ಜೋಕಿಮ್ಸ್  ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶ್ರೀಲತಾ, ಉಪಸ್ಥಿತರಿದ್ದರು.

 

ಸೈಂಟ್ ಜೋಕಿಮ್ಸ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಹಿಲ್ಡಾ ರೋಡ್ರಿಗಸ್ ಸ್ವಾಗತಿಸಿದರು. ಜೋಕಿಮ್ಸ್ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಅರುಣ್ ಕುಮಾರ್ ವಂದಿಸಿ, ಸೈಂಟ್ ಜೋಕಿಮ್ಸ್ ಪ್ರೌಢಶಾಲೆಯ ಶಿಕ್ಷಕಿ ಪೂರ್ಣಿಮಾ ಪಿ ಕಾರ್ಯಕ್ರಮವನ್ನು ನಿರೂಪಿಸಿದರು.

error: Content is protected !!
Scroll to Top