ಚೆಸ್ ಪಂದ್ಯಾಟ- ಕಡಬದ ಸೈಂಟ್ ಆನ್ಸ್ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ



(ನ್ಯೂಸ್ ಕಡಬ) newskadaba.com ಜು. 31. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊಣಾಜೆ ಇದರ ಜಂಟಿ ಆಶ್ರಯದಲ್ಲಿ ನಡೆದ ವಲಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಕಡಬದ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಎಂಟು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.







17ರ ವಯೋಮಾನದ ವಿಭಾಗದಲ್ಲಿ ನಾಲ್ಕು ಜನ ವಿದ್ಯಾರ್ಥಿಗಳು ಹಾಗೂ ಹದಿನಾಲ್ಕರ ವಯೋಮಾನದ ವಿಭಾಗದಲ್ಲಿ ನಾಲ್ಕು ವಿದ್ಯಾರ್ಥಿಗಳು ವಿಜಯಿಗಳಾಗಿ ಮುಂಬರಲಿರುವ ತಾಲೂಕು ಮಟ್ಟದ ಪಂದ್ಯಾಟದಲ್ಲಿ ಆಯ್ಕೆಗೊಂಡಿರುತ್ತಾರೆ.






error: Content is protected !!
Scroll to Top