(ನ್ಯೂಸ್ ಕಡಬ) newskadaba.com ಮಂಗಳೂರು, ಜು.31. ಬಾಳೆಪುಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈರಂಗಳ ಗ್ರಾಮದ ಮುಡಿಪು ಮುಖ್ಯ ರಸ್ತೆಯಲ್ಲಿರುವ ಅಂಗಡಿಯು ಪ್ಲಾಸ್ಟಿಕ್ ಕಸವನ್ನು ರಸ್ತೆ ಬದಿ ಎಸೆದು ಬೆಂಕಿ ಹಾಕಿ ಸುಟ್ಟಿರುವ ಪ್ರಕರಣಕ್ಕೆ ರೂ. 10 ಸಾವಿರ ದಂಡ ವಿಧಿಸಲಾಗಿದೆ.
ಪ್ಲಾಸ್ಟಿಕ್ ಕಸ ಮತ್ತು ಇತರ ಕಸವನ್ನು ಅಂಗಡಿಯ ಎದುರು ಸುಡುತ್ತಿದ್ದು, ಗ್ರಾಮ ಪಂಚಾಯತ್ ಅಂಗಡಿ ಮಾಲಕರಿಗೆ ರೂ. 10 ಸಾವಿರ ದಂಡ ವಿಧಿಸಿದೆ. ದಂಡ ಪಾವತಿ ತಪ್ಪಿದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೂಚನೆ ನೀಡಿದ್ದಾರೆ.
ರಸ್ತೆ ಬದಿ ಕಸ ಎಸೆತ: ರೂ.10 ಸಾವಿರ ದಂಡ ವಿಧಿಸಿದ ಗ್ರಾಮ ಪಂಚಾಯತ್








