ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಕಡಬದ ಸೈoಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ



(ನ್ಯೂಸ್ ಕಡಬ) newskadaba.com ಕಡಬ, ಆ. 01.  ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಸುದಾನ  ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್  ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸೈoಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.







 

ಸುಹಾನ್ ಎಂ ಆರ್, ಸುಶಾಂತ್ ಎಂ ಆರ್, ಕಾಶಿಶ್ ಪಿ.ವಿ ಗೌಡ ಹಾಗೂ ಅನ್ವಿತ್ ಯು ತಂಡದಲ್ಲಿದ್ದರು. 8ನೇ ತರಗತಿಯ 14ರ ವಯೋಮಾನದ ಆಯ್ಕೆ ಪ್ರಕ್ರಿಯೆಯಲ್ಲಿ ಸೈoಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಕಾರ್ತಿಕ್ ಅಡಿವಪ್ಪ ಮಯಂಕರ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಚಾಲಕರಾದ ವಂದನೀಯ ಫಾ. ಪೌಲ್ ಪ್ರಕಾಶ್ ಡಿಸೋಜಾ ಹಾಗೂ ಪ್ರಾಂಶುಪಾಲರಾದ ವಂದನೀಯ ಫಾ. ಸುನಿಲ್ ಪ್ರವೀಣ್ ಪಿಂಟೋ ಅಭಿನಂದನೆ ಸಲ್ಲಿಸಿದ್ದಾರೆ.






error: Content is protected !!
Scroll to Top