(ನ್ಯೂಸ್ ಕಡಬ) newskadaba.com ಆ. 02. ತೀವ್ರ ಮಳೆಯಿಂದಾಗಿ ಗುಡ್ಡ ಕುಸಿದು ಮೂವರು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ರವಿವಾರದಂದು ಬೆಳಗಿನ ಜಾವ 2:30ರ ವೇಳೆ ನಡೆದಿದೆ.
ಮೃತಪಟ್ಟವರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿಯ ಕೊಕ್ಕರೆಗಾರು ಗ್ರಾಮದ ಮೂಲದ ಮಲ್ಲಿಕಾರ್ಜುನ, ನಾಗವೇಣಿ ಮತ್ತು ಸಂತೋಷ (3) ಎಂದು ಗುರುತಿಸಲಾಗಿದೆ.
ಮಳೆಯ ತೀವ್ರತೆ ಹೆಚ್ಚಿದ್ದದರಿಂದ ಗುಡ್ಡ ಕುಸಿದಿದ್ದು, ಕೆಳಭಾಗದಲ್ಲಿ ಶೆಡ್ ನಿರ್ಮಾಣ ಮಾಡಿಕೊಂಡು ವಾಸ ಮಾಡುತ್ತಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೂವರ ಮೃತದೇಹಗಳು ಮಣ್ಣಿನ ಅಡಿಯಲ್ಲಿ ಸಿಲುಕಿಕೊಂಡಿದ್ದು, ಹೊರ ತೆಗೆಯಲು ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಪಕ್ಕದ ಶೆಡ್‌ನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.












