ಸುಬ್ರಹ್ಮಣ್ಯ: ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಮಾದಕ ದ್ರವ್ಯ ಹಾಗೂ ವ್ಯಸನಗಳ ಬಗ್ಗೆ ಜಾಗೃತಿ ಕಾರ್ಯಕ್ರಮ



(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 02. ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿ ಇರುವ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಮಹಿಳಾ ಹಾಸ್ಟೆಲ್ ನಲ್ಲಿ ಮಾದಕ ದ್ರವ್ಯ ವ್ಯಸನದ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.







ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರು ಮಾದಕ ದ್ರವ್ಯಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳು ಮತ್ತು ಅದರಿಂದ ನಾವು ಹೇಗೆ ದೂರ ಇರಬೇಕು, ಹೆಣ್ಣುಮಕ್ಕಳ ಸುರಕ್ಷತೆಯ ಬಗ್ಗೆ, ಅಪರಿಚಿತರನ್ನು ಪರಿಚಯ ಮಾಡಿಕೊಳ್ಳದೆ ಹಾಗೂ ಅವರೊಂದಿಗೆ ಸಲುಗೆಯಿಂದ ನಡೆದುಕೊಳ್ಳದೆ ಇರುವುದು, ಶಾಲಾ ಕಾಲೇಜುಗಳ ಆವರಣಗಳಲ್ಲಿ ನಡೆಯುವಂತಹ ಡ್ರಗ್ಸ್ ದಂಧೆಯನ್ನು ಹೇಗೆ ನಾವು ಹಿಮ್ಮೆಟ್ಟಿಸಬೇಕು ಹಾಗೂ ಯಾವ ರೀತಿಯ ಜಾಗೃತಿಯನ್ನು ಮೂಡಿಸಬೇಕು ಎಂಬ ಬಗ್ಗೆ ಸವಿವರವಾಗಿ ಮಹಿಳಾ ಹಾಸ್ಟೆಲ್ ನ ಸುಮಾರು 70 ವಿದ್ಯಾರ್ಥಿನಿಯರಿಗೆ ವಿವರವಾದ ಮಾಹಿತಿಗಳನ್ನು ನೀಡಿದರು.






ಈ ಸಂದರ್ಭದಲ್ಲಿ ಪೊಲೀಸ್ ಠಾಣಾ ಸಿಬ್ಬಂದಿ ಚಂದನ್, ಬಿಸಿಎಂ ಮಹಿಳಾ ಹಾಸ್ಟೆಲ್ನ ಸಹಾಯಕಿ ರತ್ನ ಮುಂತಾದವರು ಹಾಜರಿದ್ದರು.

error: Content is protected !!
Scroll to Top