ಸಿವಿಲ್ ಪೊಲೀಸ್ ನೇಮಕಾತಿ ಪರೀಕ್ಷೆ ಪೂರ್ಣ



(ನ್ಯೂಸ್‌ ಕಡಬ) newskadaba.com,ಆ.03 : ರಾಜ್ಯಾದ್ಯಂತ ಬಹುನಿರೀಕ್ಷಿತ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿ ಪರೀಕ್ಷೆಯು ಅತ್ಯಂತ ಯಶಸ್ವಿಯಾಗಿ ಮತ್ತು ಸುಗಮವಾಗಿ ಮುಕ್ತಾಯಗೊಂಡಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ತಿಳಿಸಿದ್ದಾರೆ.







ಬೆಂಗಳೂರಿನ 149 ಕೇಂದ್ರಗಳು ಸೇರಿದಂತೆ ರಾಜ್ಯದಾದ್ಯಂತ ಒಟ್ಟು 884 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದವು.ಅರ್ಜಿ ಸಲ್ಲಿಸಿದ್ದ 3,77,861 ಅಭ್ಯರ್ಥಿಗಳಲ್ಲಿ %92.52 ರಷ್ಟು ಮಂದಿ ಬೆಳಗಿನ ಅವಧಿಯ ಪರೀಕ್ಷೆಗೆ ಹಾಜರಾಗಿದ್ದರು.ಅರ್ಜಿ ಸಲ್ಲಿಸಿದ್ದ 76,676 ಅಭ್ಯರ್ಥಿಗಳಲ್ಲಿ %94 ರಷ್ಟು ಮಂದಿ ಸಂಜೆಯ ಅವಧಿಯ ಪರೀಕ್ಷೆಗೆ ಹಾಜರಾಗಿದ್ದರು.






ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ತಡೆಯಲು ತಂತ್ರಜ್ಞಾನದ ಗರಿಷ್ಠ ಬಳಕೆ ಮಾಡಲಾಗಿತ್ತು. ಎಲ್ಲಾ ಕೊಠಡಿಗಳ ಮೇಲೆ ವೆಬ್ ಕಾಸ್ಟಿಂಗ್ ಹಾಗೂ ಕೆಇಎ ಕೇಂದ್ರ ಕಚೇರಿಯ ಕಮಾಂಡ್ ಸೆಂಟರ್ ಮೂಲಕ ನೇರ ನಿಗಾ ವಹಿಸಲಾಗಿತ್ತು.ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪರೀಕ್ಷೆ ಮುಗಿದ ತಕ್ಷಣವೇ ಒಎಂಆರ್ (OMR) ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ಕೆಇಎ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ.

error: Content is protected !!
Scroll to Top