(ನ್ಯೂಸ್ ಕಡಬ) newskadaba.com ಮಂಗಳೂರು, ಆ. 03. ಸಿರಿ ತೋಟಗಾರಿಕೆ ಸಂಘ (ತೋಟಗಾರಿಕೆ ಇಲಾಖೆಯ ಅಂಗ ಸಂಸ್ಥೆ), ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಆವರಣ ಬೆಂದೂರು, ಮಂಗಳೂರು ಇದರ ವತಿಯಿಂದ, ತೋಟಗಾರಿಕೆ ಪಿತಾಮಹ ಡಾ.ಎಂ.ಎಚ್. ಮರೀಗೌಡರ ಜನ್ಮದಿನಾಚರಣೆ ಸಪ್ತಾಹದ ಅಂಗವಾಗಿ ಅಣಬೆ ಕೃಷಿ ತರಬೇತಿ ಕಾರ್ಯಕ್ರಮವನ್ನು ಆಗಸ್ಟ್ 11 ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಬೆಂದೂರು ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಆಸಕ್ತರು ರೂ. 100 ಶುಲ್ಕ ಪಾವತಿಸಿ ಆಗಸ್ಟ್ 8 ರೊಳಗೆ ಹೆಸರು ನೋಂದಾಯಿಸಬಹುದು. Mushroom Spawn (ಅಣಬೆ ಬೀಜ) ಮತ್ತು Ready to Fruit Bag ಬೇಕಾದವರು ಮುಂಚಿತವಾಗಿ ತಿಳಿಸಿದಲ್ಲಿ ಒದಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ದೂ.ಸಂ: 9845523944ಗೆ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




