ಚರ್ಚ್ ದಾಳಿ ಎಂಬ ಸುಳ್ಳು ಸುದ್ದಿಯನ್ನು ಹರಡಿದ ಆರೋಪ ► ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.01. ಮಂಗಳೂರಲ್ಲಿ ಚರ್ಚ್ ದಾಳಿಯಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಮಂಗಳೂರು ಸೆಂಟ್ರಲ್ ಉಪ ವಿಭಾಗದ ಎಸಿಪಿಯವರು ಗುರುವಾರದಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕು ನಿವಾಸಿಗಳಾದ ಸುನಿಲ್ ವೇಗಸ್ ಹಾಗೂ ಸಚಿತ್ ಪಿ.ಪಿ ಎಂದು ಗುರುತಿಸಲಾಗಿದೆ. ಇವರು ಚರ್ಚ್ ದಾಳಿಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಕೋಮು ಪ್ರಚೋದನಕಾರಿಯಾಗಿ ವರ್ತಿಸಿದ್ದರು. ಈ ಬಗ್ಗೆ ತನಿಖೆ ನಡೆಸಿದ ಮಂಗಳೂರು ಸೆಂಟ್ರಲ್ ಉಪ ವಿಭಾಗದ ಎಸಿಪಿಯವರು ಆರೋಪಿಗಳನ್ನು ಗುರುವಾರದಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Also Read  ನಿರತ ಸಾಹಿತ್ಯ ಪ್ರಶಸ್ತಿ - 2020

error: Content is protected !!
Scroll to Top