(ನ್ಯೂಸ್ ಕಡಬ) newskadaba.com ಮಂಗಳೂರು, ಆ. 07. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನೇರ ಸಾಲ ನೀಡಲು ಉದ್ದೇಶಿಸಿದೆ. ಈ ಸಾಲ ಯೋಜನೆಯಲ್ಲಿ ಹಲವು ಉದ್ದಿಮೆ (ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಉದ್ಯಮ, ವ್ಯಾಪಾರ, ಇತ್ಯಾದಿ) ನಡೆಸಲು ರೂ.1 ಲಕ್ಷ ಹಾಗೂ ರೂ. 2 ಲಕ್ಷಗಳ ಸಾಲ ಒದಗಿಸಲು ಯೋಜನೆ ರೂಪಿಸಿದೆ. ಈ ಮೊತ್ತದಲ್ಲಿ ಶೇ. 20ರಷ್ಟು ಸಹಾಯಧನ ಹಾಗೂ ಉಳಿಕೆ ಶೇ.80ರಷ್ಟು ಮೊತ್ತಕ್ಕೆ ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಮಂಡಳಿಯಿಂದ ನೇರವಾಗಿ ಸಾಲ ಮಂಜೂರು ಮಾಡಲಾಗುತ್ತದೆ.
ವಿಪ್ರ ಸ್ವ-ಉದ್ಯಮ ನೇರಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆ ದಿನ. https://ksbdb.co.in/Loan/ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ ಯೋಜನೆಯ ಉಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ದೂರವಾಣಿ ಸಂಖ್ಯೆ 8029605888, 8762249230 ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ (0824-2453222) ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












