ಸಂಪೂರ್ಣ ಹದಗೆಟ್ಟ ಕರಂಬಾರು ಬಂತಡ್ಕದ ರಸ್ತೆ ದುರಸ್ತಿಗಾಗಿ ಸ್ಥಳೀಯರಿಂದ ಅಗ್ರಹ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 07.  ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಂಬಾರು ಬಂತಡ್ಕದ ರಸ್ತೆಯು ತೀರಾ ಸಂಪೂರ್ಣ ಹದಗೆಟ್ಟಿದ್ದು, ದಿನನಿತ್ಯ ಈ ರಸ್ತೆಯಲ್ಲಿ ಸಂಚರಿಸುವ ಶಾಲಾ ಮಕ್ಕಳು ಹಾಗೂ ಸ್ಥಳೀಯ ನಿವಾಸಿಗಳು ರಸ್ತೆಯ ಕೆಸರಿನಲ್ಲಿ ಹೊರಲಾಡಿಕೊಂಡು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ರಸ್ತೆಗೆ ಹಲವು ಬಾರಿ ಗ್ರಾಮ ಪಂಚಾಯತ್ ಹಾಗೂ ಜನಪತಿನಿಧಿಗಳಿಗೆ ಮನವಿಯನ್ನು ನೀಡಿದರೂ ಯಾವುದೇ ಸ್ಪಂದನೆ ನೀಡದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಈ ಭಾಗದಲ್ಲಿ ಸರಿ ಸುಮಾರು ನೂರಕ್ಕೂ ಅಧಿಕ ಮನೆಗಳಿದ್ದು, ಇನ್ನಾದರೂ ಈ ರಸ್ತೆಯನ್ನು ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ದುರಸ್ತಿಗೊಳ್ಳಿಸಲು ಸ್ಥಳೀಯರು ಆಗ್ರಹಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕರಂಬಾರು ಬಂತಡ್ಕದ ಪ್ರದೇಶಕ್ಕೆ ಕೊನೆಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಇತ್ತೀಚಿನ ಭಾರೀ ಮಳೆಯಿಂದ ಉಂಟಾದ ಬಂತಡ್ಕದ ರಸ್ತೆ ಹಾನಿಯನ್ನು ಪರಿಶೀಲಿಸಿದರು. ಹಾಗೂ ಬಂತಡ್ಕದ ಮೂಲಭೂತ ಸೌಲಭ್ಯವನ್ನು ಕಲ್ಪಿಸಲು ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕರ್ನಾಡಿಸ್ ಬೆಳ್ತಂಗಡಿ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅರುಣ್ ಲೋಬೋ, ಶಾಫಿ, ನವೀನ್ ಗೌಡ, ಆನಂದ, ಹಸೈನಾರ್, ಇಸಾಕ್, ಗಣೇಶ್, ಲಕ್ಷ್ಮಿ ಹಾಗೂ ಶಿರ್ಲಾಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ MK, ಅಲ್ ಉಮ್ಮ ಹೆಲ್ಪ್ ಲೈನ್ ಸದಸ್ಯರಾದ ಸಿದ್ದೀಕ್ ಬಂತಡ್ಕ, ಮೊಹಮ್ಮದ್ ಪುತ್ತು ಮೋನು ಅಶ್ರಫ್, ಅಝೀಮ್, ಉಮೇಶ್. ದಿನೇಶ್ ಬಂತಡ್ಕ ಮೊದಲಾದವರು ಜೊತೆಗಿದ್ದರು.

ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದ ರಕ್ಷಿತ್ ಶಿವರಾಂ ವಿಪರೀತ ಮಳೆಯಿಂದ ಹಾನಿಗೊಳಗಾದ ಬಂತಡ್ಕ ಪ್ರದೇಶಕ್ಕೆ ಅಗತ್ಯ ನೆರವು ತಲುಪಿಸುವ ನಿಟ್ಟಿನಲ್ಲಿ ತಮ್ಮಿಂದ ಸಾಧ್ಯವಾದ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

Scroll to Top