(ನ್ಯೂಸ್ ಕಡಬ) newskadaba.com, ಆ.11: ಸೋಮವಾರ ಮುಂಬೈನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ರೈಲಿನಲ್ಲಿ ಘಟನೆ ನಡೆದಿದೆ. ಸುರತ್ಕಲ್ ನಿಲ್ದಾಣದಲ್ಲಿ ರೈಲು ನಿಂತಾಗ ಕೆಳಗಿಳಿದಿದ್ದ ವೃದ್ಧ ಪ್ರಯಾಣಿಕರೊಬ್ಬರು, ರೈಲು ಹೊರಟಾಗ ಅವಸರದಲ್ಲಿ ಚಲಿಸುವ ರೈಲನ್ನು ಹತ್ತಲು ಯತ್ನಿಸಿ ಆಯತಪ್ಪಿ ಹಳಿಗೆ ಬಿದ್ದಿದ್ದಾರೆ
ಕರ್ತವ್ಯದಲ್ಲಿದ್ದ ರೈಲ್ವೆ ಪಾಯಿಂಟ್ಸ್‌ಮ್ಯಾನ್ ಸಂದೀಪ್ ನಾಯಕ್ ಅವರು ತಕ್ಷಣವೇ ಸ್ಪಂದಿಸಿ, ಹಳಿಗೆ ಬಿದ್ದ ವೃದ್ಧರನ್ನು ರೈಲಿನಿಂದ ದೂರಕ್ಕೆ ಎಳೆದು ಸುರಕ್ಷಿತವಾಗಿ ಮೇಲೆತ್ತಿದ್ದಾರೆ.
ಸಮಯಪ್ರಜ್ಞೆಯಿಂದ ಪ್ರಾಣಾಪಾಯ ತಪ್ಪಿಸಿದ ಪಾಯಿಂಟ್ಸ್‌ಮ್ಯಾನ್ ಸಂದೀಪ್ ನಾಯಕ್ ಅವರ ಸಾಹಸಕ್ಕೆ ರೈಲ್ವೆ ಇಲಾಖೆ ಹಾಗೂ ಸಾರ್ವಜನಿಕ ವಲಯದಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.








