ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಶಾಲಾ ಬಸ್ – 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸುರಕ್ಷಿತ



(ನ್ಯೂಸ್‌ ಕಡಬ) newskadaba.com,  ಆ.11 : ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್‌ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.ಇಳಿಜಾರು ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ಬಸ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಚಾಲಕನ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ.







ಘಟನೆ ನಡೆದಾಗ ಬಸ್‌ನಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಯಾವುದೇ ಪ್ರಾಣಹಾನಿ ಸಂಭವಿಸದೆ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಸಂಪೂರ್ಣವಾಗಿ ತುಂಡಾಗಿದ್ದು, ಶಾಲಾ ಬಸ್‌ಗೆ ಜಖಂಗೊಂಡಿದೆ.






ಅಪಘಾತದ ನಂತರ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತಾದರೂ, ಅದೃಷ್ಟವಶಾತ್‌ ದೊಡ್ಡ ಅನಾಹುತ ತಪ್ಪಿದೆ.

error: Content is protected !!
Scroll to Top