ಆ. 14ರಂದು ವಿಧಾನಸಭೆ ಸ್ಪೀಕರ್, ಸಭಾಪತಿ ಸ್ಥಾನಕ್ಕೆ ಚುನಾವಣೆ

(ನ್ಯೂಸ್‌ ಕಡಬ) newskadaba.com,  ಆ.12: ರಾಜ್ಯ ವಿಧಾನಮಂಡಲದ ಸ್ಪೀಕರ್ ಹಾಗೂ ಸಭಾಪತಿ ಸ್ಥಾನಗಳಿಗೆ ಚುನಾವಣಾ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 14ರಂದು ಚುನಾವಣೆ ನಡೆಯಲಿದೆ.

 

ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಸ್ಪಷ್ಟ ಸಂಖ್ಯಾಬಲ ಹೊಂದಿರುವುದರಿಂದ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಕಡಿಮೆಯಿದ್ದು, ಅವಿರೋಧ ಆಯ್ಕೆ ನಡೆಯುವ ಲಕ್ಷಣಗಳಿವೆ. ಕೊನೆಯ ಕ್ಷಣದ ಬದಲಾವಣೆಗಳಾಗದಿದ್ದಲ್ಲಿ ವಿಧಾನಸಭೆಯ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಹಾಗೂ ವಿಧಾನ ಪರಿಷತ್ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆಯಾಗುವ ಸಾಧ್ಯತೆಯಿದೆ.

 

Scroll to Top