(ನ್ಯೂಸ್ ಕಡಬ) newskadaba.com, ಆ.12 ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ದೇಶವಾಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ವಿಡಿಯೋ ಸಂದೇಶದ ಮೂಲಕ ಶುಭಾಶಯ ತಿಳಿಸಿದ್ದು, ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಕರೆ ನೀಡಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಿದ ಪ್ರಧಾನಿಯವರು, ಪ್ರತಿಯೊಬ್ಬರೂ ತಮ್ಮ ಮನೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತ್ರಿವರ್ಣ ಧ್ವಜವನ್ನು ಹೆಮ್ಮೆಯಿಂದ ಹಾರಿಸಿ, ರಾಷ್ಟ್ರೀಯ ಸಂಭ್ರಮದಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿದ್ದಾರೆ. ಪ್ರತಿಯೊಬ್ಬ ಭಾರತೀಯನಲ್ಲೂ ದೇಶಭಕ್ತಿ ಹಾಗೂ ರಾಷ್ಟ್ರೀಯ ಏಕತೆಯ ಭಾವನೆಯನ್ನು ಮೂಡಿಸುವ ಉದ್ದೇಶದಿಂದ ಈ ಅಭಿಯಾನವನ್ನು ದೇಶಾದ್ಯಂತ ಹಮ್ಮಿಕೊಳ್ಳಲಾಗಿದೆ.








