(ನ್ಯೂಸ್ ಕಡಬ) newskadaba.com, ಆ.13 ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಉಪ್ಪಳದಲ್ಲಿ ನಡೆದಿದೆ.ಮಂಗಲ್ಪಾಡಿ ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ …..
ಆಗಸ್ಟ್ 11ರ ಮಂಗಳವಾರ ಸಂಜೆ ಸ್ನೇಹಿತರೊಂದಿಗೆ ಮನೆ ಸಮೀಪದ ಕೆರೆಗೆ ಸ್ನಾನಕ್ಕೆ ತೆರಳಿದ್ದ ಬಾಲಕ ಮನೆಗೆ ಮರಳಿರಲಿಲ್ಲ. ಕುಟುಂಬಸ್ಥರು ಹುಡುಕಾಟ ನಡೆಸಿ, ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆತ ಕೆರೆಯಲ್ಲಿ ಮುಳುಗಿರುವುದು ಬೆಳಕಿಗೆ ಬಂದಿದೆ.
ಸ್ಥಳೀಯರು ಹಾಗೂ ಉಪ್ಪಳ ಅಗ್ನಿಶಾಮಕ ಸಿಬ್ಬಂದಿ ತಡರಾತ್ರಿ ಶೋಧ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಮೃತದೇಹವನ್ನು ಮಂಗಲ್ಪಾಡಿ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








