(ನ್ಯೂಸ್ ಕಡಬ) newskadaba.com, ಆ.13 :ಕಡಬ ತಾಲೂಕಿನ ಚಾರ್ವಾಕದಲ್ಲಿ ಕಾಲೇಜು ವಿದ್ಯಾರ್ಥಿನಿಯನ್ನು ಪ್ರೀತಿಸುವಂತೆ ಒತ್ತಾಯಿಸಿ ನಿರಂತರವಾಗಿ ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಪದ್ಮನಾಭ ಎಂಬಾತನ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯಾರ್ಥಿನಿಯನ್ನು ಹಿಂಬಾಲಿಸುವುದಲ್ಲದೆ, ಆಕೆಯ ಕುಟುಂಬಸ್ಥರಿಗೆ ಹಾಗೂ ಸಹಪಾಠಿಗೆ ಕೊಲೆ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಈ ಕುರಿತು ಆಗಸ್ಟ್ 11ರಂದು ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದ ಮೇಲೆ BNS 2023ರ ಕಲಂ 78(2) ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.








