ಐತ್ತೂರು: ವಿವಾಹಿತ ಮಹಿಳೆ ಆತ್ಮಹತ್ಯೆ



(ನ್ಯೂಸ್ ಕಡಬ) newskadaba.com ಕಡಬ, ಜೂ.02. ಮಹಿಳೆಯೋರ್ವರು ವಿಷ ಸೇವಿಸಿ‌ ಆತ್ಮಹತ್ಯೆ ಮಾಡಿಕೊಂಡ ಘಟನೆ ಠಾಣಾ ವ್ಯಾಪ್ತಿಯ ಐತ್ತೂರಿನಲ್ಲಿ ನಡೆದಿದೆ.







ಆತ್ಮಹತ್ಯೆ ಮಾಡಿಕೊಂಡಾಕೆಯನ್ನು ಐತ್ತೂರು ಗ್ರಾಮದ 72 ಕಾಲನಿ ನಿವಾಸಿ ಪರಶುರಾಮ ಎಂಬವರ ಪತ್ನಿ ಶಾರದಾ(28) ಎಂದು ಗುರುತಿಸಲಾಗಿದೆ. ಈಕೆ ಮೇ 26 ರಂದು ತನ್ನ ಮನೆಯಲ್ಲಿ ವಿಷ ಸೇವಿಸಿದ್ದು, ಮೇ 28 ರಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರದಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top