(ನ್ಯೂಸ್ ಕಡಬ) newskadaba.com, ಆ.22 ಶಿವಮೊಗ್ಗ: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಎಲ್ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಆವರಣದಲ್ಲಿ ದ್ವಿಭಾಷಾ (ಕನ್ನಡ-ಇಂಗ್ಲಿಷ್) ಶಿಕ್ಷಣ ನೀಡುವ 1,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ನಿರ್ಮಿಸಲು ಸರ್ಕಾರ ಉದ್ದೇಶಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮುಂದಿನ 2 ವರ್ಷಗಳಲ್ಲಿ 500 KPS ಶಾಲೆಗಳನ್ನು ಲೋಕಾರ್ಪಣೆಗೊಳಿಸುವ ಗುರಿ ಹೊಂದಲಾಗಿದೆ.ರಾಜ್ಯ ಸರ್ಕಾರದ 750 ಕೋಟಿ ರೂ. ಪೂರಕ ನಿಧಿ ಹಾಗೂ ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ (ADB) ಆರ್ಥಿಕ ನೆರವಿನೊಂದಿಗೆ ಒಟ್ಟು 1,750 ಕೋಟಿ ರೂ. ವೆಚ್ಚದಲ್ಲಿ ಮುಂದಿನ 4 ವರ್ಷಗಳಲ್ಲಿ ಯೋಜನೆ ಪೂರ್ಣಗೊಳ್ಳಲಿದೆ.
ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 75,000 ಹುದ್ದೆಗಳ ಪೈಕಿ ಈಗಾಗಲೇ 15,000 ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.1000 KPS ಶಾಲೆಗಳ ಜೊತೆಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿಧಿಯಿಂದ ಉರ್ದು ಸೇರಿದಂತೆ ದ್ವಿಭಾಷಾ KPS ಶಾಲೆಗಳನ್ನು ಆರಂಭಿಸಲಾಗುವುದು.








