(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆಯಾಶ್ರಿತ ಭತ್ತದ ಬೆಳೆಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದ್ದು, ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಈ ಯೋಜನೆಯನ್ನು ಅನುಷ್ಠಾನ ಮಾಡಲು ಇಂಡಸ್ ಇಂಡ್ ಜನರಲ್ ಇನ್ಯುರೆನ್ಸ್ ಕಂಪನಿ ಲಿ. (ರಿಲಯನ್ಸ್ ಜನರಲ್ ಇನ್ಯುರೆನ್ಸ್ ಕಂಪನಿ ಲಿ.) ಅನ್ನು ನಿಗದಿಪಡಿಸಲಾಗಿರುತ್ತದೆ.
ಎಲ್ಲಾ ಬೆಳೆಗಳಿಗೆ ಸಂಬಂಧಿಸಿದಂತೆ ನೋಂದಣಿಗೆ ಆಗಸ್ಟ್ 31 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಆದುದರಿಂದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ವ್ಯಾಪ್ತಿಯಿಂದ ಹೊರಗುಳಿಯದ ಮತ್ತು ನಿಗದಿತ ಅರ್ಹತಾ ಮಾನದಂಡಗಳನ್ನು ಪೂರೈಸುವ ಅರ್ಹ ಸಾಲಗಾರ ರೈತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








