(ನ್ಯೂಸ್ ಕಡಬ) newskadaba.com ಆ. 24. ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಆಗಸ್ಟ್ 21ರಂದು ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಾಂತೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ರಿದಮಿಕ್ ಪೇರ್ ವಿಭಾಗದಲ್ಲಿ 10ನೇ ತರಗತಿಯ ದಿಗಂತ್ ಹಾಗೂ 9ನೇ ತರಗತಿ ತಶ್ವಿನ್ ಬಿ.ಕೆ ದ್ವಿತೀಯ ಸ್ಥಾನವನ್ನು ಪಡೆದು ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.
ಇವರಿಗೆ ಸಂಸ್ಥೆಯ ಶಿಕ್ಷಕಿ ಶ್ರೀಮತಿ ಜಲಜಾಕ್ಷಿ ಬಿ.ವಿ ಇವರು ಮಾರ್ಗದರ್ಶನ ನೀಡಿರುತ್ತಾರೆ.








