(ನ್ಯೂಸ್ ಕಡಬ) newskadaba.com, ಆ.26: ಎಲೆಕ್ಟ್ರಾನಿಕ್ ಸಿಟಿಯ ನೈಸ್ ಟೋಲ್ ಬಳಿ ಬೆಳ್ಳಂಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಟ್ಟಡ ಕಾರ್ಮಿಕನೊಬ್ಬ ದುರ್ಮರಣಕ್ಕೀಡಾಗಿದ್ದಾನೆ.ಬಿಹಾರ ಮೂಲದ ಗಾರೆ ಕಾರ್ಮಿಕ ಬಾಬುಜೀ ಮಿಯಾ (45).ಬಾಬುಜೀ ಅವರು ಕೆಲಸಕ್ಕಾಗಿ ಉತ್ತರಹಳ್ಳಿಯಿಂದ ಸರ್ಜಾಪುರದ ಕಡೆಗೆ ಪ್ರಯಾಣಿಸುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ತಲೆಯ ಮೇಲೆ ಹರಿದಿದೆ. ಅಪಘಾತದ ರಭಸಕ್ಕೆ ಅವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ಅಪಘಾತ ಎಸಗಿದ ಬಳಿಕ ಟ್ರಕ್ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಿ ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.








