(ನ್ಯೂಸ್ ಕಡಬ) newskadaba.com ಆ. 31. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಇದರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಪಂದ್ಯಾಟದಲ್ಲಿ 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಸಾತ್ವಿಕ್ ರೈ ಹಾಗೂ 17 ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪೂರ್ವಿಕ ರೈ ಉಡುಪಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.
ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಚಾಲಕರಾದ ವಂದನೀಯ ಫಾ. ಪೌಲ್ ಪ್ರಕಾಶ್ ಡಿಸೋಜ ಹಾಗೂ ಪ್ರಾಂಶುಪಾಲರಾದ ವಂದನೀಯ ಫಾ.ಸುನಿಲ್ ಪ್ರವೀಣ್ ಪಿಂಟೋ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.








