(ನ್ಯೂಸ್ ಕಡಬ) newskadaba.com ಸೆ. 01. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ಉಳಾಯಿಬೆಟ್ಟು ಮೌಲಾನ ಆಜಾದ್ ಮಾದರಿ ಶಾಲೆಗೆ ಗಣಿತ ಮತ್ತು ವಿಜ್ಞಾನ ವಿಷಯಕ್ಕೆ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ವೇತನ ಮಾಸಿಕ ರೂ.14000 ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಶಾಲೆಯ ಮುಖ್ಯ ಶಿಕ್ಷಕ (ದೂರವಾಣಿ ಸಂ: 7022125839) ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








