ಸುಳ್ಯ: ಟ್ಯಾಂಕರ್ ಢಿಕ್ಕಿಯಾಗುವುದನ್ನು ತಪ್ಪಿಸಿದ ಕೆಎಸ್ಸಾರ್ಟಿಸಿ ಚಾಲಕ ► ಬಸ್ ಚಾಲಕನ ಸಮಯಪ್ರಜ್ಞೆಗೆ ವ್ಯಾಪಕ ಪ್ರಶಂಸೆ



(ನ್ಯೂಸ್ ಕಡಬ) newskadaba.com ಸುಳ್ಯ, ಜೂ.04. ಟ್ಯಾಂಕರೊಂದು ವಿರುದ್ಧ ದಿಕ್ಕಿನಲ್ಲಿ ಬಂದು ಢಿಕ್ಕಿಯಾಗುತ್ತದೆ ಎನ್ನುವುದನ್ನು ಅರಿತ ಕೆಎಸ್ಸಾರ್ಟಿಸಿ ಚಾಲಕನೋರ್ವ ತನ್ನ ಸಮಯ ಪ್ರಜ್ಞೆಯಿಂದಾಗಿ ಸಂಭಾವ್ಯ ಅಪಾಯವನ್ನು ತಪ್ಪಿಸಿದ ಘಟನೆ ಸೋಮವಾರದಂದು ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಕೊಯನಾಡು ಸಮೀಪ ನಡೆದಿದೆ.







ಕುಕ್ಕೇ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಗೆ ಕೊಯನಾಡು ಸಮೀಪ ರಾಂಗ್ ಬಂದು ಢಿಕ್ಕಿಯಾಗುವುದರಲ್ಲಿತ್ತು. ಅಪಾಯವನ್ನು ಅರಿತ ಬಸ್ ಚಾಲಕ ಬಸ್ಸನ್ನು ರಸ್ತೆಯ ಎಡಬದಿಗೆ ಚಲಾಯಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿದರಾದರೂ ಬಸ್ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ನಿಂತಿದೆ. ಚಾಲಕನ ಸಮಯಪ್ರಜ್ಞೆಗೆ ಪ್ರಯಾಣಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.






 

error: Content is protected !!
Scroll to Top