ಕೆಆರ್‌ಐಡಿಎಲ್ ಅಧಿಕಾರಿಗಳ ವಿರುದ್ಧ ಕಾಂಗ್ರೆಸ್ ಶಾಸಕ ಅಶೋಕ್ ರೈ ಭ್ರಷ್ಟಾಚಾರ ಆರೋಪ – ಸಿಎಂಗೆ ಪತ್ರ



 

(ನ್ಯೂಸ್‌ ಕಡಬ) newskadaba.com, ಸೆ.01:ಮಂಗಳೂರು ಕೆಆರ್‌ಐಡಿಎಲ್  ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್‌ಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಗುತ್ತಿಗೆದಾರರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಗಂಭೀರ ಆರೋಪ ಮಾಡಿದ್ದಾರೆ.







ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಸಿಕ ಹಣ ನೀಡಬೇಕು ಎಂದು ಹೇಳಿ, ‘ಕೆಆರ್‌ಐಡಿಎಲ್ ಚಾರ್ಜ್’ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ. 7ರಷ್ಟು ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ ಹಾಗೂ ಪ್ರಶ್ನಿಸಿದವರಿಗೆ ಬೆದರಿಕೆ ಒಡ್ಡಲಾಗುತ್ತಿದೆ ಎಂದು ದೂರಿದ್ದಾರೆ.






ಸಾರ್ವಜನಿಕ ಹಣದ ದುರುಪಯೋಗ ತಡೆಯಲು ಮತ್ತು ಪಾರದರ್ಶಕತೆ ಕಾಯ್ದುಕೊಳ್ಳಲು ಈ ಪ್ರಕರಣದ ಕುರಿತು ನಿಷ್ಪಕ್ಷಪಾತ ಹಾಗೂ ಸಮಗ್ರ ಇಲಾಖಾ ತನಿಖೆ ನಡೆಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ತನಿಖೆ ಪೂರ್ಣಗೊಳ್ಳುವವರೆಗೆ ಆರೋಪಿ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಅಥವಾ ಬೇರೆಡೆ ವರ್ಗಾಯಿಸಬೇಕು. ಆರೋಪ ಸಾಬೀತಾದಲ್ಲಿ ಅಕ್ರಮವಾಗಿ ಪಡೆದ ಹಣವನ್ನು ವಸೂಲಿ ಮಾಡಿ ಕಠಿಣ ಶಿಸ್ತು ಕ್ರಮ ಜರುಗಿಸಬೇಕೆಂದು ಶಾಸಕರು ಆಗ್ರಹಿಸಿದ್ದಾರೆ.

error: Content is protected !!
Scroll to Top