ದರ್ಬೆ ಜನಸೇವಾ ಕೇಂದ್ರದ ಮಾಲಕಿ ಹಾಗೂ ಪುತ್ರನಿಗೆ ಕೋರ್ಟ್‌ನಿಂದ ಜಾಮೀನು



(ನ್ಯೂಸ್‌ ಕಡಬ) newskadaba.com, ಸೆ.01: ದರ್ಬೆಯ ಜನಸೇವಾ ಕೇಂದ್ರದಲ್ಲಿ ದಾಖಲೆ ಹಾನಿಗೊಳಗಾದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಹಲ್ಲೆ ಪ್ರಕರಣದ ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.







ನ್ಯಾಯಾಂಗ ಬಂಧನದಲ್ಲಿದ್ದ ಸುದರ್ಶನ್ ಪೈಗೆ ಜಾಮೀನು ಸಿಕ್ಕಿದ್ದರೆ, ಜನಸೇವಾ ಕೇಂದ್ರದ ಮಾಲಕಿ ಅಂಜನಾ ಎಸ್. ಪೈ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.ಸುಳ್ಯದ ಜಾಲ್ಲೂರು ನಿವಾಸಿ ಫಾತಿಮತ್ ಮಿಸ್ವಾನ್ ಅವರು ನೀಡಿದ ದೂರಿನನ್ವಯ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.






ಪ್ರಿಂಟ್ ಮತ್ತು ಲ್ಯಾಮಿನೇಷನ್‌ಗೆ ನೀಡಿದ್ದ ದಾಖಲೆ ತಾಂತ್ರಿಕ ದೋಷದಿಂದ ಹಾನಿಗೊಳಗಾದಾಗ, ಅದನ್ನು ಸರಿಪಡಿಸಿಕೊಡುವಂತೆ ಕೇಳಿದ್ದಕ್ಕೆ ಅಂಜನಾ ಪೈ ಹಾಗೂ ಸುದರ್ಶನ್ ಪೈ ಅವರು ನಿಂದಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿತ್ತು.ದೂರಿನ ಆಧಾರದಲ್ಲಿ ಪೊಲೀಸರು ಸುದರ್ಶನ್ ಪೈ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದರು. ಇದೀಗ ನ್ಯಾಯಾಲಯ ಇಬ್ಬರಿಗೂ ಜಾಮೀನು ನೀಡಿದೆ.

error: Content is protected !!
Scroll to Top